ಜನನ ಪ್ರಮಾಣ ಕ್ಷೀಣಿಸುತ್ತಿದೆ ಹೆಚ್ಚು ಮಕ್ಕಳನ್ನು ಹೆರುವಂತೆ ಮಹಿಳೆಯರಿಗೆ ಮನವಿ- ಕಿಮ್‌ ಜಾಂಗ್‌ ಉನ್‌

ಉತ್ತರ ಕೊರಿಯಾ: ದೇಶದ ಮಹಿಳೆಯರು ಹೆಚ್ಚಿನ ಮಕ್ಕಳನ್ನು ಹೊಂದಬೇಕು ಎಂದು ಮನವಿ ಮಾಡಿ ಉತ್ತರ ಕೊರಿಯಾ ನಾಯಕ ಕಿಮ್‌ ಜಾಂಗ್‌ ಉನ್‌ ಕಣ್ಣೀರಿಟ್ಟಿದ್ದಾರೆ. ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿ, ಉತ್ತರ ಕೊರಿಯಾದಲ್ಲಿ ಜನನ ಪ್ರಮಾಣ ಕ್ಷೀಣಿಸುತ್ತಿದೆ. ರಾಷ್ಟ್ರೀಯ ಶಕ್ತಿಯನ್ನು ಬಲಪಡಿಸಲು ದೇಶದ ಮಹಿಳೆಯರು ಹೆಚ್ಚಿನ ಮಕ್ಕಳನ್ನು ಹೊಂದಬೇಕು ಎಂದು ಮನವಿ ಮಾಡಿದ್ದಾರೆ.

ಉತ್ತರ ಕೊರಿಯಾದಲ್ಲಿ ತಾಯಂದಿರಿಗಾಗಿ ನಡೆದ ಕಾರ್ಯಕ್ರಮದಲ್ಲಿ ಮನವಿ ಮಾಡುವಾಗ ಬಿಳಿ ಕರವಸ್ತ್ರದಿಂದ ತನ್ನ ಕಣ್ಣುಗಳನ್ನು ಒರೆಸಿಕೊಂಡ ದೃಶ್ಯ ಕಂಡುಬಂದಿದೆ. ಜನನ ಪ್ರಮಾಣ ಕುಸಿತವಾಗದಂತೆ ನೋಡಿಕೊಳ್ಳಬೇಕು. ಮಕ್ಕಳ ಉತ್ತಮ ಆರೈಕೆ ಮತ್ತು ಅವರಿಗೆ ಶಿಕ್ಷಣ ಒದಗಿಸುವುದು ನಮ್ಮ ಕುಟುಂಬದ ಆದ್ಯ ಕರ್ತವ್ಯ. ನಾವು ನಮ್ಮ ತಾಯಂದಿರೊಂದಿಗೆ ಒಟ್ಟಾಗಿ ನಿಲ್ಲುತ್ತೇವೆ ಎಂದು ತಿಳಿಸಿದ್ದಾರೆ.

ವಿಶ್ವಸಂಸ್ಥೆಯ ಮಾಹಿತಿಯ ಪ್ರಕಾರ, ಇತ್ತೀಚಿನ ದಶಕಗಳಲ್ಲಿ ಜನನದಲ್ಲಿ ವಿಸ್ತೃತ ಕುಸಿತದ ನಡುವೆ 2023ರ ಹೊತ್ತಿಗೆ ಉತ್ತರ ಕೊರಿಯಾದಲ್ಲಿ ಜನಿಸಿದ ಮಕ್ಕಳ ಸರಾಸರಿ ಸಂಖ್ಯೆ 1.8 ರಷ್ಟಿದೆ. ಕಡಿಮೆ ಜನನ ದರವನ್ನು ನಿಭಾಯಿಸುವ ಪ್ರಯತ್ನದಲ್ಲಿ ಉತ್ತರ ಕೊರಿಯಾವು ಮೂರು ಅಥವಾ ಹೆಚ್ಚಿನ ಮಕ್ಕಳನ್ನು ಹೊಂದಿರುವ ಕುಟುಂಬಗಳಿಗೆ ಆದ್ಯತೆಯ ಉಚಿತ ವಸತಿ ವ್ಯವಸ್ಥೆ, ರಾಜ್ಯ ಸಬ್ಸಿಡಿಗಳು, ಉಚಿತ ಆಹಾರ, ಔಷಧ ಮತ್ತು ಗೃಹೋಪಯೋಗಿ ವಸ್ತುಗಳು, ಮಕ್ಕಳಿಗೆ ಶೈಕ್ಷಣಿಕ ಸವಲತ್ತು ಸೇರಿ ಅನೇಕ ಕೊಡುಗೆಗಳನ್ನು ಘೋಷಿಸಿದೆ.

Advertisement

ದಕ್ಷಿಣ ಕೊರಿಯಾದ ಫಲವಂತಿಕೆ ದರವು ಜಗತ್ತಿನಲ್ಲಿ ಅತ್ಯಂತ ಕಡಿಮೆಯಾಗಿದೆ. ಸ್ಪರ್ಧಾತ್ಮಕ ಶಾಲಾ ಮಾರುಕಟ್ಟೆ, ದುರ್ಬಲ ಮಕ್ಕಳ ಆರೈಕೆ, ಪುರುಷ ಕೇಂದ್ರಿತ ಕಾರ್ಪೊರೇಟ್ ಸಂಸ್ಕೃತಿ ಇದಕ್ಕೆ ಮುಖ್ಯ ಕಾರಣ ಎಂದು ವಿಶ್ಲೇಷಿಸಲಾಗಿದೆ.

ಉತ್ತರ ಕೊರಿಯಾದಲ್ಲಿ 2034 ರಿಂದ ಜನಸಂಖ್ಯೆ ತಗ್ಗುವ ಸಾಧ್ಯತೆ ಇದೆ. 2070ರ ವೇಳೆಗೆ ದೇಶದ ಜನಸಂಖ್ಯೆಯು 2.3 ಕೋಟಿಗೆ ಇಳಿಯಲಿದೆ ಎಂದು ವರದಿಯಲ್ಲಿ ಪ್ರಕಟಣೆ ಮಾಡಲಾಗಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement