ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಕೇಶ್ವಾನ್ನ ದಟ್ಟ ಅರಣ್ಯದಲ್ಲಿ ಉಗ್ರರೊಂದಿಗೆ ನಡೆದ ಭೀಕರ ಗುಂಡಿನ ಕಾಳಗ ನಡೆದಿದ್ದು, ಈ ವೇಳೆ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಓರ್ವ ಸೇನಾಧಿಕಾರಿ ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ.
ಸೇನೆಯ ವೈಟ್ ನೈಟ್ ಕಾರ್ಪ್ಸ್ ಪ್ರಕಾರ, ನವೆಂಬರ್ 10ದಂದು ಕಿಶ್ತ್ವಾರ್ನ ಭರ್ಟ್ ರಿಡ್ಜ್ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಸೇನಾಧಿಕಾರಿಯನ್ನು ನಯೀಬ್ ಸುಬೇದಾರ್ ರಾಕೇಶ್ ಕುಮಾರ್ ಸಾವನ್ನಪ್ಪಿದ್ದಾರೆ ಮತ್ತು ಇತರ ಮೂವರು ಕಮಾಂಡೋಗಳು ಗಾಯಗೊಂಡಿದ್ದಾರೆ. ಭಾರತೀಯ ಸೇನೆ ಹಾಗೂ ಜಮ್ಮು ಕಾಶ್ಮೀರ ಪೊಲೀಸರಿಂದ ಉಗ್ರರಿಗಾಗಿ ಜಂಟಿ ಕಾರ್ಯಚರಣೆ ನಡೆಸಿದ್ದು, ಈ ವೇಳೆ ಉಗ್ರರ ದಾಳಿಗೆ ಸೇನಾಧಿಕಾರಿ ಹಾಗೂ ಇತರ ಮೂವರು ಗಾಯಗೊಂಡಿದ್ದರು.
ಕೂಡಲೇ ಅವರನ್ನು ಚಿಕಿತ್ಸೆಗಾಗಿ ಉಧಂಪುರಕ್ಕೆ ಕಳುಹಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೇನಾಧಿಕಾರಿ ನೈಬ್ ಸುಬೇದಾರ್ ಕುಮಾರ್ ಸಾವನ್ನಪ್ಪಿದ್ದು, ಉಳಿದ ಮೂವರ ಪೈಕಿ ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಸೇನೆಯ ವೈಟ್ ನೈಟ್ ಕಾರ್ಪ್ಸ್ ವರದಿ ಮಾಡಿದೆ.