ಕಾರ್ಗಿಲ್: ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ನಲ್ಲಿ ಇಂದು ಬೆಳಗ್ಗೆ ಸುಮಾರಿಗೆ 4.3 ತೀವ್ರತೆಯ ಭೂಕಂಪ ಸಂಭವಿಸಿದೆ.
ಭೂಕಂಪವಾಗುತ್ತಿದ್ದಂತೆ ತಕ್ಷಣವೇ ಜನರು ಮನೆಯಿಂದ ಹೊರಗೆ ಓಡಿಬಂದಿದ್ದಾರೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ, ಆಸ್ತಿ ಪಾಸ್ತಿ ನಷ್ಟ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಕಳೆದ ಕೆಲ ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಪದೇ ಪದೇ ಭೂಕಂಪಗಳು ಸಂಭವಿಸುತ್ತಿದೆ. ಮೇ 1 ರಂದು ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ನಲ್ಲಿ 3.4 ರ ತೀವ್ರತೆಯ ಭೂಕಂಪ, ಏಪ್ರಿಲ್ 18 ರ ಕಿಶ್ತ್ವಾರ್ನಲ್ಲಿ 4.0 ತೀವ್ರತೆಯ ಭೂಕಂಪ ಹಾಗೂ ಏಪ್ರಿಲ್ 19ರಂದು ಕಾರ್ಗಿಲ್ ಮತ್ತು ಲಡಾಖ್ನಲ್ಲಿ 3.0 ತೀವ್ರತೆಯ ಭೂಕಂಪ ಸಂಭವಿಸಿದೆ.