ನವದೆಹಲಿ :ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿ ಜಮ್ಮು ಮತ್ತು ಕಾಶ್ಮೀರವು ಭಯೋತ್ಪಾದಕರ ತಾಣದಿಂದ ಪ್ರವಾಸಿ ತಾಣವಾಗಿ ಮಾರ್ಪಟ್ಟಿದೆ. ಶಾಂತಿ ಮತ್ತು ಅಭಿವೃದ್ಧಿಯ ಹೊಸ ಯುಗಕ್ಕೆ ಸಾಕ್ಷಿಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ.
ಚುನಾವಣಾ ಕಣದಲ್ಲಿರುವ ಕೇಂದ್ರಾಡಳಿತ ಪ್ರದೇಶಕ್ಕೆ ತೆರಳಿದ ಅಮಿತ್ ಶಾ ತಮ್ಮ ಎರಡು ದಿನಗಳ ಭೇಟಿಯಲ್ಲಿ ಬಿಜೆಪಿಯ ‘ಸಂಕಲ್ಪ ಪತ್ರ’ (ಪ್ರಣಾಳಿಕೆ) ಬಿಡುಗಡೆ ಮಾಡಲಿದ್ದಾರೆ ಮತ್ತು ‘ಕಾರ್ಯಕರ್ತ ಸಮ್ಮೇಳನ’ದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.
ಮೋದಿ ಸರ್ಕಾರದ ಅಡಿಯಲ್ಲಿ J&K ಶಾಂತಿ ಮತ್ತು ಅಭಿವೃದ್ಧಿಯ ಹೊಸ ಯುಗಕ್ಕೆ ಸಾಕ್ಷಿಯಾಗಿದೆ. ಶೈಕ್ಷಣಿಕ ಮತ್ತು ಆರ್ಥಿಕ ಚಟುವಟಿಕೆಗಳ ಹೆಚ್ಚಳದೊಂದಿಗೆ ಈ ಪ್ರದೇಶವು ಭಯೋತ್ಪಾದಕರ ತಾಣದಿಂದ ಪ್ರವಾಸಿ ತಾಣವಾಗಿ ಮಾರ್ಪಟ್ಟಿದೆ” ಎಂದು ಅವರು X ನಲ್ಲಿ ಬರೆದುಕೊಂಡಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.