ಬೆಂಗಳೂರು; ಕೆಎಸ್‌ಆರ್‌ಟಿಸಿ ನೌಕರರಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ. ಹೀಗಾಗಿ, ಸಾರಿಗೆ ಸಂಸ್ಥೆ ಮುಂದಿನ 5 ವರ್ಷಗಳ ಕಾಲ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ.
ಈ ಒಪ್ಪಂದದ ಪ್ರಕಾರ ನೌಕರರು 10 ಮಾದರಿಯ ಹೃದಯ ಸಂಬಂಧಿತ ಕಾಯಿಲೆಗಳ ತಪಾಸಣೆ ಮಾಡಿಸಿಕೊಳ್ಳಬಹುದು. ತಪಾಸಣೆಗೆ ಒಳಗಾಗುವ ಪ್ರತಿ ನೌಕರರ ಪರವಾಗಿ ನಿಗಮವು 1200 ಅನ್ನು ಆಸ್ಪತ್ರೆಗೆ ಪಾವತಿಸುತ್ತದೆ.