ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಖಾಲಿ ಇರುವ ಸುಮಾರು 64 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ಈ ಹಿಂದೆ ಅರ್ಜಿ ಸಲ್ಲಿಸಲು ಮಾರ್ಚ್ 10 ಕಡೆಯ ದಿನ ಎಂದು ಹೇಳಲಾಗಿತ್ತು. ಇದೀಗ ಅವಧಿಯನ್ನು ಮಾರ್ಚ್ 21ರ ತನಕ ವಿಸ್ತರಿಸಲಾಗಿದೆ. ಸಹಾಯಕ ಎಂಜಿನಿಯರ್ ಮತ್ತು ಪ್ರಥಮ ದರ್ಜೆ ಲೆಕ್ಕ ಸಹಾಯಕರು
ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಆಫ್‌ಲೈನ್ ಮೂಲಕ ಒಎಂಆರ್ ಮಾದರಿಯಲ್ಲಿ ಪರೀಕ್ಷೆ ನಡೆಸಲಾಗುವುದು. ತಲಾ ನೂರು ಅಂಕಗಳ ಎರಡು ಪ್ರಶ್ನೆ ಪತ್ರಿಕೆ ಇರಲಿದೆ.