ಪಾಕಿಸ್ತಾನ: ಈ ವರ್ಷಾಂತ್ಯದಲ್ಲಿ ಸಾರ್ವತ್ರಿಕ ಚುನಾವಣೆ ತಯಾರಿ ನಡೆಸುವ ನಿಟ್ಟಿನಲ್ಲಿ ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯನ್ನು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ನೇತೃತ್ವದ ಸಮ್ಮಿಶ್ರ ಸರ್ಕಾರವು ಅವಧಿಗೆ ಮುಂಚಿತವಾಗಿ ವಿಸರ್ಜಿಸುವ ಸಾಧ್ಯತೆ ಇದ್ದು, ಅಮೇರಿಕಾದ ಮಾಜಿ ರಾಯಭಾರಿ ಜಲೀಲ್ ಅಬ್ಬಾಸ್ ಜಿಲಾನಿ ಹಂಗಾಮಿ ಅವರು ಶೆಹಬಾಜ್ ಷರೀಫ್ ಅವರನ್ನು ಭೇಟಿಯಾಗಿದ್ದು ಜಲೀಲ್ ಅವರು ಪಾಕ್‌ನ ಹಂಗಾಮಿ ಪ್ರಧಾನಿ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಅಧಿಕೃತ ಘೋಷಣೆ ಆಗಲಿಲ್ಲ.
ಇತ್ತೀಚೆಗೆ ತನ್ನ ಸಂಸತ್ತನ್ನು ವಿಸರ್ಜಿಸಿರುವ ಪಾಕಿಸ್ತಾನ, ಜಲೀಲ್ ಅಬ್ಬಾಸ್ ಜಿಲಾನಿ ಅವರನ್ನು ಹಂಗಾಮಿ ಪ್ರಧಾನಿಯಾಗಿ ಹೆಸರಿಸಬಹುದು ಎಂದು ಜರ್ಮನಿಯ ಮಾಜಿ ಪಾಕಿಸ್ತಾನಿ ರಾಯಭಾರಿ ಮತ್ತು ಭಾರತದ ಹೈ ಕಮಿಷನರ್ ಅಬ್ದುಲ್ ಬಸಿತ್ ಹೇಳಿದ್ದಾರೆ.
ಪಾಕಿಸ್ತಾನದ ಹಂಗಾಮಿ ಪ್ರಧಾನ ಮಂತ್ರಿಯಾಗಿ ನೇಮಕಗೊಂಡ ಜಲೀಲ್ ಅಬ್ಬಾಸ್ ಜಿಲಾನಿ ಅವರಿಗೆ ಅಭಿನಂದನೆಗಳು ಎಂದು ಅಬ್ದುಲ್ ಬಸಿತ್ ಅವರು ಟ್ವೀಟ್ ಮಾಡಿದ್ದಾರೆ.
ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಜಿಲಾನಿ ಅವರು ವಿದೇಶಿ ಕಚೇರಿಗಳನ್ನು ನಿರ್ವಹಿಸುವಲ್ಲಿ ಅನುಭವ ಹೊಂದಿದ್ದಾರೆ. ಅಲ್ಲದೆ ಯುನೈಟೆಡ್ ಸ್ಟೇಟ್ಸ್ ಸೇರಿದಂತೆ ಪಾಕಿಸ್ತಾನದ ರಾಯಭಾರಿಯಾಗಿ ಹಲವಾರು ಇತರ ದೇಶಗಳಲ್ಲಿ ಸೇವೆ ಸಲ್ಲಿಸಿದ್ದಾರೆ.