ಜಾರ್ಖಂಡ್ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಬಂಧನಕ್ಕೆ ಒಳಗಾದಂತ ಹೇಮಂತ್ ಸೊರೆನ್ ಬಳಿಕ, ಜಾರ್ಖಂಡ್ ನೂತನ ಮುಖ್ಯಮಂತ್ರಿಯಾಗಿ ಚಂಪೈ ಸೊರೇನ್ ಗದ್ದುಗೆಗೆ ಏರಿದ್ದರು. ಇಂದು ಅವರು ಚಾರ್ಖಂಡ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮಾಡಿದ್ದು, ಅದರಲ್ಲಿ ಗೆಲುವು ಸಾಧಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಇಂದು ಬೆಳಿಗ್ಗೆ ರಾಜ್ಯ ವಿಧಾನಸಭೆಗೆ ವಿಶ್ವಾಸಮತ ಯಾಚನೆಯಲ್ಲಿ ಭಾಗವಹಿಸಲು ಆಗಮಿಸಿದ್ದರು. ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮುಖ್ಯಸ್ಥರಿಗೆ ರಾಂಚಿಯ ವಿಶೇಷ ನ್ಯಾಯಾಲಯವು ವಿಶ್ವಾಸಮತ ಯಾಚನೆಯಲ್ಲಿ ಭಾಗವಹಿಸಲು ಅನುಮತಿ ನೀಡಿತ್ತು. ವಿಧಾನಸಭೆಯಲ್ಲಿ ತನ್ನ ಬಂಧನದ ಬಗ್ಗೆ ಮಾತನಾಡಿದ ಸೊರೆನ್, ತನ್ನ ಬಂಧನದ ದಿನವನ್ನು ಭಾರತದ ಇತಿಹಾಸದಲ್ಲಿ ಕಪ್ಪು ಅಧ್ಯಾಯ ಎಂದು ಕರೆದರು.