ದಾವಣಗೆರೆ; ಹರಿಹರ ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರದಲ್ಲಿ ಟೂಲ್ & ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಆಟೋಮೆಷನ್ ಮತ್ತು ರೊಬೋಟಿಕ್ಸ್ ವಿಭಾಗದಲ್ಲಿ ಖಾಲಿ ಇರುವ ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಬೋಧನೆಯಲ್ಲಿ ಕನಿಷ್ಠ ಒಂದು ವರ್ಷ ಅನುಭವವಿರುವ ಎಂ.ಎಸ್ಸಿ (ಭೌತಶಾಸ್ತ್ರ)ದಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ. ಜನವರಿ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು ಹೆಚ್ಚಿನ ಮಾಹಿತಿಗೆ ಕಾಲೇಜು ಸಂಪರ್ಕಿಸಲು ಅಥವಾ ಮೊ. 8711913947 ಗೆ ಕರೆ ಮಾಡಲು ಪ್ರಾಂಶುಪಾಲರು ತಿಳಿಸಿದ್ದಾರೆ.


































