ಚಿತ್ರದುರ್ಗ: 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಅಂತರಾಷ್ಟಿçÃಯ ಮತ್ತು ರಾಷ್ಟಿçÃಯ ಮಟ್ಟದ ಅಧಿಕೃತ ಕ್ರೀಡಾ ಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಜಿಮ್ ಸ್ಥಾಪನೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ ತರಬೇತುದಾರರಿಂದ ಪರಿಶೀಲಿಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಿಂದ ದೃಢೀಕರಿಸಿ ಸೆ.27ರೊಳಗಾಗಿ, ಬೆಂಗಳೂರಿನ ಕೇಂದ್ರ ಕಚೇರಿಗೆ ಕಳುಹಿಸಿಕೊಡುವಂತೆ ಸೂಚಿಸಿದೆ. ಕೇಂದ್ರ ಕಚೇರಿಗೆ ನೇರವಾಗಿ ಬಂದ ಅರ್ಜಿಗಳನ್ನು ಹಾಗೂ ಕೊನೆಯ ದಿನಾಂಕದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.
				
															
                    
                    
                    
                    
                    































