ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ದಾವಣಗೆರೆ ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆ ಹಾಗೂ ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಕ್ಯಾನ್ಸರ್ ತಪಾಸಣಾ ಕ್ಲಿನಿಕ್ ಪ್ರಾರಂಭಿಸಲಾಗಿದೆ.
ಪ್ರತಿ ಸೋಮವಾರ ಮತ್ತು ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ತಜ್ಞರೊಂದಿಗೆ ಉಚಿತ ಸಮಲೋಚನೆ ಇರುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.