ಚಿತ್ರದುರ್ಗ: ರೋಗಿಗಳು ಹಾಗೂ ಅವರ ಸಂಬAಧಿಗಳು ಜಿಲ್ಲಾ ಆಸ್ಪತ್ರೆಯಲ್ಲಿ ಯಾವುದೇ ಕಾರಣಕ್ಕೂ ವೈದ್ಯಕೀಯ ಸಿಬ್ಬಂದಿ ಹಾಗೂ ಮಧ್ಯವರ್ತಿಗಳಿಗೆ ಹಣ ನೀಡಬೇಡಿ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಎಸ್.ಪಿ.ರವೀದ್ರ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು ರೋಗಿಗಳು ಯಾರಿಗೂ ಹಣ ನೀಡಿ ಪ್ರೋತ್ಸಾಹಿಸಬಾರದು. ಆಸ್ಪತ್ರೆಯಲ್ಲಿ ಯಾರಾದರೂ ಹಣ ಕೇಳಿದಲ್ಲಿ ಕೂಡಲೇ ಜಿಲ್ಲಾ ಶಸ್ತçಚಿಕಿತ್ಸಕರ ಗಮನಕ್ಕೆ ತರಬೇಕು. ರೋಗಿಗಳು ಆಸ್ಪತ್ರೆಗೆ ಬರುವಾಗ ತಪ್ಪದೇ ಆಧಾರ್ ಕಾರ್ಡ್ ಮತ್ತು ರೇಷನ್ ತರಬೇಕು. ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ದಾಖಲಾದ ಎಲ್ಲಾ ರೋಗಿಗಳಲ್ಲಿ ಉಚಿತ ಚಿಕಿತ್ಸೆಯನ್ನು ನೀಡಲಾಗುತ್ತದೆ.
ಆಸ್ಪತ್ರೆಯಲ್ಲಿ ದಾಖಲಾದಾಗ ರೋಗಿಯವರನ್ನು ನೋಡಲು ನಿಗದಿತ ಸಮಯದಲ್ಲಿ ಮಾತ್ರ ಸಾರ್ವಜನಿಕರು ಆಸ್ಪತ್ರೆ ಭೇಟಿ ಮಾಡಬೇಕು. ಆಸ್ಪತ್ರೆಯ ಆವರಣವನ್ನು ಸ್ವಚ್ಛವಾಗಿರಿಸಲು ಸಹಕರಿಸಬೇಕು. ಜಿಲ್ಲಾ ಆಸ್ಪತ್ರೆಯ ಬಗ್ಗೆ ಯಾವುದೇ ದೂರುಗಳು ಇದ್ದಲ್ಲಿ ಮೊಬೈಲ್ ಸಂಖ್ಯೆ 9449843163 ಕೆರೆ ಮಾಡುವಂತೆ ಅವರು ತಿಳಿಸಿದ್ದಾರೆ.