ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಮಟ್ಟದಲ್ಲಿ ವಕ್ಫ್ ಅದಾಲತ್ ನಡೆಸಲಾಗುವುದು ಎಂದು ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ವಕ್ಫ್ ಇಲಾಖೆಗೆ ಸಂಬಂಧಿಸಿದಂತೆ ಪ್ರತ್ಯೇಕ ಸಭೆ ನಡೆಸಿ ಅಲ್ಲಿನ ಸಮಸ್ಯೆ ಪರಿಹರಿಸಲಾಗುವುದು. ಪ್ರತಿ ಜಿಲ್ಲೆಯಲ್ಲಿರುವ ವಕ್ಫ್ ಆಸ್ತಿಗಳು, ಒತ್ತುವರಿ ಪ್ರಮಾಣ, ನ್ಯಾಯಾಲಯದಲ್ಲಿರುವ ಪ್ರಕರಣಗಳ ಬಗ್ಗೆ ಸಮಗ್ರ ಮಾಹಿತಿ ಪಡೆಯಲಾಗುವುದು.
ವಕ್ಫ್ ವ್ಯಾಪ್ತಿಯ ಆಸ್ತಿ ಒತ್ತುವರಿ ತೆರವು ಹಾಗೂ ನ್ಯಾಯಾಲಯದಲ್ಲಿರುವ ಪ್ರಕರಣಗಳ ತ್ವರಿತ ಇತ್ಯರ್ಥ ಹಾಗೂ ಇರುವ ಆಸ್ತಿಗಳ ಸಂರಕ್ಷಣೆಗೆ ಹೆಚ್ಚು ಒತ್ತು ನೀಡಲಾಗುವುದು ಎಂದರು.
ವಕ್ಫ್ ವ್ಯಾಪ್ತಿಯಲ್ಲಿ ಪ್ರತಿ ಜಿಲ್ಲೆ ಹಾಗೂ ತಾಲೂಕಿನಲ್ಲಿ ಎಷ್ಟೆಷ್ಟು ಆಸ್ತಿ ಬಾಡಿಗೆ, ಲೀಸ್ ಆಧಾರದಲ್ಲಿ ನೀಡಲಾಗಿದೆ, ಲೀಸ್ ಅವಧಿ ಮುಗಿದಿರುವ ಪ್ರಕರಣ ಎಷ್ಟು, ಎಷ್ಟು ಬಾಡಿಗೆ ಪ್ರಸ್ತುತ ಬರುತ್ತಿದೆ ಎಂಬ ಸಂಪೂರ್ಣ ವಿವರ ಸಿದ್ದಪಡಿಸಿ ಎಂದು ಸೂಚನೆ ನೀಡಿದರು.