ಬೆಂಗಳೂರು: ಜುಲೈ 15ರಿಂದ ಜುಲೈ 26ರವರೆಗೆ ವಿಧಾನ ಮಂಡಲ ಅಧಿವೇಶನ ನಡೆಯಲಿದೆ. ಈ ಹಿನ್ನೆಲೆ ವಿಧಾನ ಸೌಧದ ಸುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸ್ವತಂತ್ರ ಉದ್ಯಾನದಲ್ಲಿ ನಡೆಯುವ ಪ್ರತಿಭಟನೆ ಹೊರತು ಪಡಿಸಿ ಈ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆ ಇರಲಿದೆ. 2 ಕಿ.ಮೀ ವ್ಯಾಪ್ತಿಯಲ್ಲಿ 5ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ಮೆರವಣಿಗೆ, ಸಭೆಗಳಿಗೆ ನಿಷೇಧ ಹೇರಲಾಗಿದೆ.
