ಬೆಂಗಳೂರು : ಜುಲೈ 16 ರಿಂದ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬಜೆಟ್ ಮಂಡನೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಜುಲೈ 16 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.
ಆಗಸ್ಟ್ 16 ಅಥವಾ 17 ರಂದು ಗೃಹಿಣಿಯರ ಖಾತೆಗೆ ಹಣ ಹಾಕಲಾಗುತ್ತದೆ ಎಂದು ಹೇಳಿದ್ದಾರೆ.ಕಾಂಗ್ರೆಸ್ ಸರ್ಕಾರ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಜಾರಿಗೆ ತರುತ್ತಿದೆ, ನುಡಿದಂತೆ ನಡೆದ ಸರ್ಕಾರ ನಮ್ಮದು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳ್ತಂಗಡಿ: ಪ್ರವಾಸಿಗರೇ ಗಮನಿಸಿ- ಗಡಾಯಿಕಲ್ಲು ಚಾರಣ ತಾತ್ಕಾಲಿಕ ನಿಷೇಧ
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕಾರ ಜುಲೈ 16 ರಿಂದ ಆರಂಭವಾಗಲಿದ್ದು, ಆಗಸ್ಟ 16 ಅಥವಾ 17 ರಿಂದ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆ ಆಗಲಿದೆ. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ಗಳಲ್ಲಿ ಯಜಮಾನಿ ಎಂದು ಗುರುತಿಸಿಕೊಂಡ ಮಹಿಳೆಯರಿಗೆ ಈ ಯೋಜನೆಯ ಲಾಭ ಸಿಗಲಿದೆ ಎಂದರು.ಬಜೆಟ್ನಲ್ಲೂ 5 ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸಿದ್ದೇವೆ. ರಾಜ್ಯ ಆರ್ಥಿಕವಾಗಿ ದಿವಾಳಿ ಆಗದಂತೆ ನೋಡಿಕೊಂಡಿದ್ದೇವೆ. 1.30 ಕೋಟಿ ಕುಟುಂಬದ ಯಜಮಾನಿಗೆ ‘ಗೃಹಲಕ್ಷ್ಮೀ’ ಹಣ ನೀಡುತ್ತೇವೆ. ಆಗಸ್ಟ್ನಿಂದ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಹಾಕುತ್ತೇವೆ.