ಬೆಂಗಳೂರು: ಬಿಪಿಎಲ್ ಕಾರ್ಡ್ದಾರರಿಗೆ ಅಕ್ಕಿ ಬದಲು ಹಣ ನೀಡುವ ಪ್ರಕ್ರಿಯೆ ಜುಲೈ 10ರಿಂದ ಪ್ರಾರಂಭವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಜುಲೈನಲ್ಲಿ ಅಕ್ಕಿ ಬದಲು ಹಣ ಕೊಡ್ತೇವೆ ಅಂತಾ ಹೇಳಲಾಗಿತ್ತು. ಆದರೆ ಜುಲೈ 1ರಂದೇ ಹಣ ಕೊಡುತ್ತೇವೆ ಅಂತಾ ಹೇಳಿಲ್ಲ. ಜುಲೈ 10ರಿಂದ ಹಣ ನೀಡುವ ಪ್ರಕ್ರಿಯೆ ಪ್ರಾರಂಭವಾಗುತ್ತದೆ ಎಂದರು. ಇನ್ನು ಈ ತಿಂಗಳಿನಿಂದಲೇ ಅನ್ನಭಾಗ್ಯ, ಗೃಹಜ್ಯೋತಿ ಯೋಜನೆ ಜಾರಿ ಮಾಡುತ್ತಿದ್ದು, ಗೃಹಜ್ಯೋತಿ ಯೋಜನೆಯಲ್ಲಿ ಆಗಸ್ಟ್ ತಿಂಗಳ ಬಿಲ್ ಉಚಿತ ಎಂದಿದ್ದಾರೆ.
ಶೀಘ್ರದಲ್ಲೇ ಎನ್‌ಇಪಿ ಬದಲಾಗಿ ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸುತ್ತೇವೆ: ಸಚಿವ ಎಂಸಿ ಸುಧಾಕರ್
5 ಕೆಜಿ ಅಕ್ಕಿ ಜೊತೆ ಉಳಿದ 5 ಕೆಜಿ ಅಕ್ಕಿ ಬದಲಿಗೆ 170 (ಪ್ರತಿ ಕೆ.ಜಿಗೆ 34) ನೀಡುತ್ತೇವೆ. 90 ಪರ್ಸೆಂಟ್ ಅಕೌಂಟ್ ಇದೆ. ಅಕೌಂಟ್ ಇಲ್ಲದವರು ಮಾಡಿಸಬೇಕು. ಒಬ್ಬರಿಗೆ 170 ರೂಪಾಯಿ ಕೊಡುತ್ತೇವೆ. ಅಕ್ಕಿ ಸಿಗುವರೆಗೆ ಮಾತ್ರ ಈ ಹಣ ನೀಡುತ್ತೇವೆ ಎಂದು ತಿಳಿಸಿದ್ದಾರೆ.