ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಜುಲೈ 21ರವರೆಗೆ ವಿಸ್ತರಿಸಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಹೇಳಿದ್ದಾರೆ.
ವರ್ಷದಲ್ಲಿ ಕನಿಷ್ಟ 60 ದಿನ ಗಳ ಕಾಲ ಅಧಿವೇಶನ ನಡೆಸಬೇಕೆಂಬ ಆಶಯ ಹೊಂದಿರುವ ಕಾರ್ಯ ಕಲಾಪಗಳ ಸಮಿತಿಯೂ ಜು.14 ರಂದು ಕೊನೆಗೊಳ್ಳಬೇಕಾಗಿದ್ದ ಪ್ರಸಕ್ತ ಅಧಿವೇಶನವನ್ನು ಜುಲೈ 21ರವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ ಎಂಬ ನಿರ್ಣಯವನ್ನು ಸ್ಪೀಕರ್ ಪ್ರಕಟಿಸಿದ್ದಾರೆ.
ಈ ಮುಂಚೆ ಜುಲೈ 3 ರಿಂದ ಜುಲೈ 14 ವರೆಗೆ ವಿಧಾನಮಂಡಲ ಅಧಿವೇಶನ ನಿಗದಿಯಾಗಿತ್ತು. ಜುಲೈ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಾರಿ ಬಜೆಟ್ ಮಂಡಿಸಲಿದ್ದಾರೆ.
ಜುಲೈ 10ರಿಂದ 19ರವೆಗೆ ಇಲಾಖಾವಾರು ಬೇಡಿಕೆಗಳ ಕುರಿತು ಚರ್ಚೆ ನಡೆಸಲಾಗುವುದು. ಜುಲೈ 20ರಂದು ಹಣಕಾಸು ವಿಧೇಯಕಗಳ ಅಂಗೀಕಾರವಿರಲಿದೆ ಎಂದು ಸ್ಪೀಕರ್ ತಿಳಿಸಿದ್ದಾರೆ.


































