7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿ ಮಾಡದ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ರಾಜ್ಯ ಸರ್ಕಾರಿ ನೌಕರರು ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲು ನಿರ್ಧರಿಸಿದ್ದಾರೆ.
ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಆಯೋಗ ವರದಿ ನೀಡಿ 4 ತಿಂಗಳಾಗುತ್ತಾ ಬಂದರೂ ಆಯೋಗದ ಶಿಫಾರಸುಗಳ ಜಾರಿಗೆ ಸರ್ಕಾರ ಮೀನಮೇಷ ಎಣಿಸುತ್ತಾ ಬಂದಿದೆ.
ಹೀಗಾಗಿ ರಾಜ್ಯದ ಎಲ್ಲ ಇಲಾಖೆಗಳ ನೌಕರರು ಬೇಸರ ವ್ಯಕ್ತಪಡಿಸಿದ್ದು, ಈ ದಿಸೆಯಲ್ಲ ಹೋರಾಟ ಅನಿವಾಯ: ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.