ಮೇ.15 ರಿಂದ ಆರಂಭವಾಗಿದ್ದ 5610 ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
SSLC ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್ 7 ರಿಂದ ನಡೆಯಬೇಕಿದ್ದ SSLC ಪರೀಕ್ಷೆ-2 ನ್ನು ಕೂಡ ಮುಂದೂಡಲಾಗಿದೆ. ಈ ಹಿಂದೆ ಮೇ 15ರಿಂದ ಜೂನ್ 5ರವರೆಗೆ ನಡೆಸಲು ಸರ್ಕಾರ ಸುತ್ತೋಲೆ ಹೊರಡಿಸಿತ್ತು.
ಈಗ ಸರ್ಕಾರದ ಸೂಚನೆ ಮೇರೆಗೆ ದಿನಾಂಕವನ್ನು ಮುಂದೂಡಿರುವ ಪ್ರೌಢ ಶಿಕ್ಷಣ ಇಲಾಖೆ, ವಿಶೇಷ ತರಗತಿಗಳನ್ನು ಮೇ 29 ರಿಂದ ಜೂನ್ 13ರವರೆಗೆ ನಡೆಸಲು ಆದೇಶ ನೀಡಲಾಗಿದೆ.