ಅಮೇರಿಕಾ: ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಅವರ ಪತ್ನಿ ಜಿಲ್ ಬೈಡನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಶ್ವೇತಭವನ ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಜಿಲ್ ಬೈಡನ್ ಅವರ ಅನಾರೋಗ್ಯದ ಹಿನ್ನಲೆ ಸೋಮವಾರ ಸಂಜೆ ಅವರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಪರೀಕ್ಷೆಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ ಎಂದು ಜಿಲ್ ಬೈಡನ್ ಅವರ ಮಾಧ್ಯಮ ಸಲಹೆಗಾರರಾದ ಎಲಿಜಬೆತ್ ಅಲೆಕ್ಸಾಂಡರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇನ್ನು ಭಾರತದಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಬೈಡನ್ ಭಾಗಿಯಾಗಲಿದ್ದು, ಅದಕ್ಕಾಗಿ ಸೆ.7 ರಂದು ಭಾರತಕ್ಕೆ ಆಗಮಿಸುತ್ತಿದ್ದಾರೆ.
ಜಿ20 ಶೃಂಗಸಭೆಯಲ್ಲಿ ವಿಶ್ವದ 43 ದೇಶಗಳ ಪ್ರತಿನಿಧಿಗಳು ಭಾರತದಲ್ಲಿ ಉಪಸ್ಥಿತರಿರಲಿದ್ದು, 43 ದೇಶಗಳ ಮುಖ್ಯಸ್ಥರು, ಸಂಸ್ಥೆಗಳು ಮತ್ತು ಪ್ರಪಂಚದಾದ್ಯಂತದ ಅವರ ನಿಯೋಗಗಳು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.