ಜ.06 ಮತ್ತು 07ರಂದು ಬಳ್ಳಾರಿಯಲ್ಲಿ ರಾಜ್ಯ ಮಟ್ಟದ ಯುವಜನೋತ್ಸವ ಸ್ಪರ್ಧೆ

 

ಚಿತ್ರದುರ್ಗ: 2023-24ನೇ ಸಾಲಿನ ರಾಜ್ಯ ಮಟ್ಟದ ಯುವಜನೋತ್ಸವ ಸ್ಪರ್ಧೆಯನ್ನು ಇದೇ ಜನವರಿ 06 ಮತ್ತು 7ರಂದು ಬಳ್ಳಾರಿ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.

2023ರ ಡಿಸೆಂಬರ್ 7ರಂದು ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.

Advertisement

ರಾಜ್ಯಮಟ್ಟದ ಯುವಜನೋತ್ಸವ ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಾಳುಗಳು ಜ.06ರಂದು ಬೆಳಿಗ್ಗೆ 10 ಗಂಟೆಗೆ ವರದಿ ಮಾಡಿಕೊಳ್ಳಲು ತಿಳಿಸಲಾಗಿದೆ.

ಸ್ಪರ್ಧಾಳುಗಳು ಲಘು ಹಾಸಿಗೆ, ಹೊದಿಕೆ ಬೀಗ ಬೀಗದ ಕೈಯನ್ನು ತೆಗೆದುಕೊಂಡು ಹೋಗತಕ್ಕದ್ದು. ಸ್ಪರ್ಧಾಳುಗಳಿಗೆ ಚಿತ್ರದುರ್ಗದಿಂದ ಬಳ್ಳಾರಿ ಜಿಲ್ಲೆಗೆ ಹೋಗಿಬರುವ ಪ್ರಯಾಣ ಭತ್ಯೆ ಹಾಗೂ ಊಟೋಪಹಾರ, ವಸತಿ ವ್ಯವಸ್ಥೆ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 08194-235635ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(ಸಾಂದರ್ಭಿಕ ಚಿತ್ರ)

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement