ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನಾ ಸಮಾರಂಭದ ಹಿನ್ನಲೆಯಲ್ಲಿ ಸಾರ್ವಜನಿಕ ವಲಯದ ಬ್ಯಾಂಕುಗಳು, ವಿಮಾ ಕಂಪನಿಗಳು, ಹಣಕಾಸು ಸಂಸ್ಥೆಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ಜನವರಿ 22 ರಂದು ಅರ್ಧ ದಿನ ರಜೆ ಘೋಷಿಸಿದೆ.
ಈ ಬಗ್ಗೆ ಹಣಕಾಸು ಸಚಿವಾಲಯ ಪ್ರಕಟನೆ ಹೊರಡಿಸಿದ್ದು, ಎಲ್ಲಾ ಪಬ್ಲಿಕ್ ಸೆಕ್ಟರ್ ಬ್ಯಾಂಕ್ ಗಳು, ಜೀವವಿಮಾ ನಿಗಮ ಕಂಪನಿಗಳು, ಪಬ್ಲಿಕ್ ಸೆಕ್ಟರ್ ಹಣಕಾಸು ಸಂಸ್ಥೆಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳು ಜನವರಿ 22ರಂದು ಮಧ್ಯಾಹ್ನ 2.30ರವರೆಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದೆ
ಬಾಲರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮದ ವೀಕ್ಷಣೆಗಾಗಿ ಕೇಂದ್ರ ಸರ್ಕಾರದ ನೌಕರರಿಗೆ ಮಧ್ಯಾಹ್ನ 2.30ರವರೆಗೆ ರಜೆ ಘೋಷಿಸಲಾಗಿತ್ತು.