ಮುಂಬೈ:ಭಾರತ ತಂಡದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.ಬುಧವಾರ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಭಾವುಕ ಪೋಸ್ಟ್‌ವೊಂದನ್ನು ಹಂಚಿಕೊಳ್ಳುವ ಮೂಲಕ ವಿದಾಯ ಘೋಷಿಸಿದ್ದು, ಏಕದಿನ ಕ್ರಿಕೆಟ್ ಮಾತ್ರ ಆಡುವುದಾಗಿ ತಿಳಿಸಿದ್ದಾರೆ. ಇದಕ್ಕೂ ಮುನ್ನ 2024ರಲ್ಲಿ ಟಿ20 ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು.
ರೋಹಿತ್ ಶರ್ಮಾ18 ವರ್ಷಗಳ ತಮ್ಮ ವೃತ್ತಿಜೀವನದಲ್ಲಿ ಒಟ್ಟು 67 ಟೆಸ್ಟ್‌ಗಳಲ್ಲಿ 12 ಶತಕಗಳು ಮತ್ತು 18 ಅರ್ಧಶತಕಗಳೊಂದಿಗೆ 40.57 ರನ್‌ರೇಟ್‌ನಲ್ಲಿ 4301 ರನ್ ಗಳಿಸಿದರು.
ಎಲ್ಲರಿಗೂ ನಮಸ್ಕಾರ, ಬಿಳಿ ಬಣ್ಣದ ಉಡುಪಿನಲ್ಲಿ ಭಾರತವನ್ನು ಪ್ರತಿನಿಧಿಸುವುದು ಗೌರವದ ಚಿಹ್ನೆ. ಇಂದು ನಾನು ಟೆಸ್ಟ್ ಕ್ರಿಕೆಟ್‌ನಿಂದ ವಿದಾಯ ಘೋಷಿಸುತ್ತಿದ್ದೇನೆ. ಇಷ್ಟು ವರ್ಷಗಳಲ್ಲಿ ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ಆದರೆ ನಾನು ಏಕದಿನ ಕ್ರಿಕೆಟ್‌ನಲ್ಲಿ ಭಾರತವನ್ನು ಪ್ರತಿನಿಧಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.