ಟೈಲರಿಂಗ್ ಹಾಗೂ ಮಹಿಳೆಯರ ಬ್ಯೂಟಿ ಪಾರ್ಲರ್ ತರಬೇತಿ ಇಲ್ಲಿ ನೀಡಲಾಗುತ್ತದೆ.

WhatsApp
Telegram
Facebook
Twitter
LinkedIn

 

ಚಿತ್ರದುರ್ಗ: ಚಿತ್ರದುರ್ಗದ ರುಡ್‍ಸೆಟ್ ಸಂಸ್ಥೆಯು ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗಾಗಿ ಸ್ವಯಂ ಉದ್ಯೋಗ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಮೇ 18ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಮಹಿಳೆಯರ 30 ದಿನಗಳ ಟೈಲರಿಂಗ್ ಹಾಗೂ  35 ದಿನಗಳು ಮಹಿಳೆಯರ ಬ್ಯೂಟಿ ಪಾರ್ಲರ್ ತರಬೇತಿ, ಹಾಗೂ ಎಲ್ಲರಿಗೂ 38 ದಿನಗಳು ಕಂಪ್ಯೂಟರ್ ಅಕೌಂಟಿಂಗ್ ತರಬೇತಿ ನೀಡಲಾಗುವುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 19 ರಿಂದ 50 ವರ್ಷ ವಯೋಮಿತಿಯೊಳಗಿರಬೇಕು. ಕನ್ನಡ ಓದಲು ಮತ್ತು ಬರೆಯಲು ಬರಬೇಕು. ತರಬೇತಿಗೆ ಸಂಬಂಧಿಸಿದಂತೆ ಪ್ರಾಥಮಿಕ ಜ್ಞಾನ ಹಾಗೂ ಸ್ವಯಂ ಉದ್ಯೋಗ ಮಾಡುವ ಆಸಕ್ತಿ ಇರಬೇಕು. ಸಂಬಂಧಪಟ್ಟ ಕೌಶಲದಲ್ಲಿ ಪ್ರಾಥಮಿಕ ಜ್ಞಾನ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

ಈ ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರಲಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಮೊಬೈಲ್ ಸಂಖ್ಯೆ ಹೊಂದಿರುವ ಸ್ವವಿವರದ ಅರ್ಜಿಯೊಂದಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್‍ಬುಕ್ ಜೆರಾಕ್ಸ್ ಪ್ರತಿಗಳನ್ನು ತೆಗೆದುಕೊಂಡು ಮೇ 18, 2026 ರಂದು ನೇರವಾಗಿ ರುಡ್‍ಸೆಟ್ ಸಂಸ್ಥೆಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8431329162, 8618282445, 8660627785, 9019244300 ಸಂಪರ್ಕಿಸಬಹುದು.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon