ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷರಾಗಿ ಚುನಾಯಿತರಾದ ಡೊನಾಲ್ಡ್ ಟ್ರಂಪ್ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.
ಈ ವೇಳೆ ಉಕ್ರೇನ್ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಕುರಿತು ಹಲವು ಪ್ರಮುಖ ವಿಷಯಗಳ ನಡುವೆ ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.
ಇತ್ತೀಚಿನ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದ ನಂತರ, ಟ್ರಂಪ್ 70 ಕ್ಕೂ ಹೆಚ್ಚು ವಿಶ್ವ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ವಿಶ್ವದ ಪ್ರಮುಖ ರಾಷ್ಟ್ರಗಳ ಇಬ್ಬರೂ ನಾಯಕರು ಐರೋಪ್ಯ ಖಂಡದಲ್ಲಿ ಶಾಂತಿ ಸ್ಥಾಪನೆ ಗುರಿ ಬಗ್ಗೆ ಚರ್ಚಿಸಿದರು.