ಬೆಂಗಳೂರು: ಡಯಾಲಿಸಿಸ್ ಚಿಕಿತ್ಸೆ ಪಡೆಯಲು ಪರದಾಡುತ್ತಿದ್ದ ರೋಗಿಗಳಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ.
ಸಿಎಂ ಸಿದ್ದರಾಮಯ್ಯನವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ 20 ಏಕಬಳಕೆಯ ಡಯಾಲಿಸಿಸ್ ಯಂತ್ರಗಳಿಗೆ ಚಾಲನೆ ನೀಡಿದ್ದಾರೆ.
ರಾಜ್ಯಾದ್ಯಂತ 800 ಯಂತ್ರಗಳನ್ನು ಅಳವಡಿಸಲಾಗಿದ್ದು, ಒಂದರಿಂದ ದಿನಕ್ಕೆ 72 ರೋಗಿಗಳಿಗೆ ಚಿಕಿತ್ಸೆ ನೀಡಬಹುದಾಗಿದೆ. ಓರ್ವ ರೋಗಿಗೆ 1573 ರೂ.ನಂತೆ ವರ್ಷಕ್ಕೆ 108 ಕೋಟಿ ರೂಪಾಯಿಯನ್ನು ಸರ್ಕಾರ ವೆಚ್ಚ ಮಾಡಲಿದೆ.