ದಾವಣಗೆರೆ; ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾಭೂಮಿ ಯಾತ್ರೆಗೆ ತೆರಳಲು ಡಾ.ಬಿ.ಆರ್ ಅಂಬೇಡ್ಕರ್ ಅನುಯಾಯಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಅಕ್ಟೋಬರ್ 10 ರೊಳಗಾಗಿ ವೆಬ್ಸೈಟ್ https://sw.kar.nic.in ನಲ್ಲಿ ನೊಂದಣಿ ಮಾಡಿಕೊಂಡು ಸ್ವೀಕೃತಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಲು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ. ನಾಗರಾಜ ತಿಳಿಸಿದ್ದಾರೆ.