ಹೊಸಪೇಟೆ: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ 2023-24ನೇ ಸಾಲಿನಲ್ಲಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿAಗ್ ವಿಷಯಗಳಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ, ಸಂಸ್ಥೆ, ಕಾಲೇಜುಗಳಲ್ಲಿ ಪಿಹೆಚ್ಡಿ ಪದವಿಗೆ ನೊಂದಾಯಿತರಾದ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಅವರು ತಿಳಿಸಿದ್ದಾರೆ.
ಅ.30ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು http://ksteps.karnataka.gov.in ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ