ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾಂಗ್ರೆಸ್‌ನ ಟ್ರಬಲ್ ಶೂಟರ್, ಹೈಕಮಾಂಡ್ ನ ನೆಚ್ಚಿನ ನಾಯಕ ಎಂದರೆ ತಪ್ಪಾಗದು. ಅದೆಷ್ಟೋ ಬಾರಿ ರಾಜ್ಯ ಅಷ್ಟೇ ಅಲ್ಲದೆ ಬೇರೆ ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರದ ಉಳಿವಿಗೆ ಡಿಕೆಶಿ ಶ್ರಮಿಸಿದ್ದಾರೆ.
ಹೀಗಾಗಿ ಅವರೆಂದರೆ ಹೈಕಮಾಂಡ್ ಗೆ ವಿಶೇಷ ಪ್ರೀತಿ. ಆದರೆ ಅದೇ ಹೈಕಮಾಂಡ್ ನಾಯಕರಾದ ವೇಣುಗೋಪಾಲ್ ಹಾಗೂ ರಣದೀಪ್ ಸುರ್ಜೇವಾಲಾ ಅವರು ಡಿ.ಕೆ.ಶಿವಕುಮಾರ್ ವಿರುದ್ಧ ಗರಂ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಕಾರಣ ಕಳೆದ ಬಾರಿ ಡಿ.ಕೆ.ಶಿವಕುಮಾರ್ ದೆಹಲಿಗೆ ಹೋಗಿದ್ದಾಗ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದು.
ಪ್ರಧಾನಿ ಮೋದಿ ಅವರು ಅವರದ್ದೆ ಪಕ್ಷದ ಮುಖ್ಯಮಂತ್ರಿಗಳ ಭೇಟಿಗೆ ಸಿಗೋದೆ ಕಷ್ಟ. ಹೀಗಿದ್ದಾಗ ಡಿ.ಕೆ.ಶಿವಕುಮಾರ್ ಅವರಿಗೆ ಹೇಗೆ ಪ್ರಧಾನಿ ಭೇಟಿಗೆ ಅವಕಾಶ ಸಿಕ್ಕಿದ್ದು ಹೇಗೆ ಅನ್ನೋ ಪ್ರಶ್ನೆ ಕಾಂಗ್ರೆಸ್ ವಲಯದಲ್ಲಿ ಎದ್ದಿದೆ.. ಇನ್ನು ಸಿದ್ದರಾಮಯ್ಯ ಕಾನೂನು ಸಂಕಷ್ಟದಲ್ಲಿರುವ ಸಂದರ್ಭದಲ್ಲೇ ಡಿ.ಕೆ.ಶಿವಕುಮಾರ್ ಅವರು ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಏನು ಮಾತನಾಡಿದರು ಎಂಬುದರ ಬಗ್ಗೆಯೂ ಅನುಮಾನ ಮೂಡಿದೆ ಎನ್ನಲಾಗ್ತಿದೆ.
ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಅಭಿವೃದ್ಧಿ ವಿಚಾರದ ಬಗ್ಗೆ ಚರ್ಚೆ ನಡೆಸಲು ಮೋದಿಯವರನ್ನು ಭೇಟಿಯಾಗಿದ್ದೆ ಎಂದು ಹೇಳಿದ್ದಾರಾದರೂ, ಈ ಬಗ್ಗೆ ಹೈಕಮಾಂಡ್‌ಗೆ ಅನುಮಾನ ಇದೆ ಎನ್ನಲಾಗಿದೆ.. ಹೀಗಾಗಿ ಡಿ.ಕೆ.ಶಿವಕುಮಾರ್ ಬಳಿ ಐದು ಪ್ರಶ್ನೆಗಳನ್ನು ಮುಂದಿಟ್ಟಿದ್ದು, ಅದಕ್ಕೆ ಡಿ.ಕೆ.ಶಿವಕುಮಾರ್‌ರಿಂದ ಉತ್ತರ ಪಡೆಯಲಾಗಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಡಿಕೆಶಿ, ನಮ್ಮ ಇಲಾಖೆಗೆ ಸಂಬಂಧಿಸಿದ ಕೆಲಸಕ್ಕಾಗಿ ನಾನು ಮೋದಿಯವರನ್ನು ಭೇಟಿಯಾಗಿದ್ದೆ. ಈ ಭೇಟಿ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ, ಇದರಲ್ಲಿ ರಾಜಜಕೀಯ ಬೆರೆಸುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.