ಚಿತ್ರದುರ್ಗ: ಚಿತ್ರದುರ್ಗದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) 2024-25ನೇ ಸಾಲಿನ ಪ್ರವೇಶಾತಿ ಆರಂಭವಾಗಿದೆ.
ಡಿಪ್ಲೊಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ (DTDM) ಹಾಗೂ ಡಿಪ್ಲೊಮಾ ಇನ್ ಮೆಕಾಟ್ರಾನಿಕ್ಸ್ (DMCH) ಮತ್ತು ಡಿಪ್ಲೊಮಾ ಇನ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ (DEC) ಕೋರ್ಸುಗಳ ಪ್ರವೇಶ ಪಡೆಯಲು ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವೆಬ್‍ಸೈಟ್‍ನಲ್ಲಿ cetonline.karnataka.gov.in/kea ಆನ್‍ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಆನ್‍ಲೈನ್ ಅರ್ಜಿ ಸಲ್ಲಿಕೆ ಮೇ 13ರಿಂದ ಪ್ರಾರಂಭವಾಗಿದ್ದು, ಮೇ.27 ಅರ್ಜಿ ಸಲ್ಲಿಸಲು ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಸರ್ವೇ ಸಂಖ್ಯೆ 44, ಹಳೆಯ ಬೆಂಗಳೂರು ರಸ್ತೆ, ಕಣಿವೆ ಮಾರಮ್ಮ ದೇವಸ್ಥಾನದ ಹಿಂಭಾಗ, ಕುಂಚಿಗನಹಾಳ್ ಚಿತ್ರದುರ್ಗ, ದೂರವಾಣಿ ಸಂಖ್ಯೆ: 9738465834, 9481866855 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಪ್ರಾಂಶುಪಾಲರು ತಿಳಿಸಿದ್ದಾರೆ.