ಚಿತ್ರದುರ್ಗದ ಜಿಲ್ಲಾ ಸಹಕಾರ ಬ್ಯಾಂಕ್ ನಿಯಮಿತದಿಂದ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಫ್ಡಿಎ, ಎಸ್ಡಿಎ ಸೇರಿದಂತೆ ಒಟ್ಟು 68 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಪದವಿ ಓದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೀಗಿದೆ ಹುದ್ದೆಗಳ ವಿವರ
ಸಹಾಯಕ ಪ್ರಧಾನ ವ್ಯವಸ್ಥಾಪಕರು – 6, ಪ್ರಥಮ ದರ್ಜೆ ಗುಮಾಸ್ತರು – 9ದ್ವಿತೀಯ ದರ್ಜೆ ಗುಮಾಸ್ತರು – 35ಕಂಪ್ಯೂಟರ್ ಇಂಜಿನಿಯರ್ – 2ವಾಹಜ ಚಾಲಕರು – 2ಸಹಾಯಕರು – 12 ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ
ಸಹಾಯಕ ಪ್ರಧಾನ ವ್ಯವಸ್ಥಾಪಕರು : ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಪ್ರಥಮ ದರ್ಜೆ ಗುಮಾಸ್ತರು : ಯಾವುದೇ ವಿಷಯದಲ್ಲಿ ಪದವಿ
ದ್ವಿತೀಯ ದರ್ಜೆ ಗುಮಾಸ್ತರು : ಯಾವುದೇ ವಿಷಯದಲ್ಲಿ ಪದವಿ
ಕಂಪ್ಯೂಟರ್ ಇಂಜಿನಿಯರ್ : ಬಿಎಸ್ಸಿ, ಬಿಇ, ಬಿಟೆಕ್ ಪದವಿ
ವಾಹನ ಚಾಲಕರು : ಎಸ್ಎಸ್ಎಲ್ಸಿ ಸಹಾಯಕರು : ಎಸ್ಎಸ್ಎಲ್ಸಿ
ವಯೋಮಿತಿ
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ಮತ್ತು ಗರಿಷ್ಠ ವಯೋಮಿತಿ 35 ವರ್ಷ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ, 3 ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ. ಜಾ, ಪ.ಪಂ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ವಿಧಾನ
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ನಡೆಸಲಾಗುವುದು.
ಅರ್ಜಿ ಸಲ್ಲಿಕೆ
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 1500 ರೂ ಅರ್ಜಿ ಶುಲ್ಕ ಮತ್ತು ಪ.ಜಾ, ಪ.ಪಂ ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ 750 ರೂ ಅರ್ಜಿ ಶುಲ್ಕ ನಿಗದಿಸಲಾಗಿದೆ.
ಇನ್ನು ಈಗಾಗಲೇ ಈ ಹುದ್ದೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್ 16 ಆಗಿದೆ. ಅರ್ಜಿ ಸಲ್ಲಿಕೆಯನ್ನು ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್ಸೈಟ್ನಲ್ಲಿ ಸಿಗುವ ಲಿಂಕ್ ಮೂಲಕ ನಡೆಸಬಹುದು.
ಈ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು chitradurgadccbank.com ಇಲ್ಲಿಗೆ ಭೇಟಿ ನೀಡಬಹುದಾಗಿದೆ.