ಬೆಂಗಳೂರು : ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿಗೆ ಬಿಜೆಪಿ ಎಂಎಲ್‌ಎ ಬಸವನಗೌಡ ಪಾಟೀಲ್ ಯತ್ನಾಳ್ ಬಿಗ್ ಶಾಕ್ ನೀಡಿದ್ದಾರೆ.ಈ ಹಿಂದೆ ಸರ್ಕಾರ ಸಿನಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಕ್ಯಾಬಿನೆಟ್ ಸಭೆಯಲ್ಲಿ ಹಿಂಪಡೆಯಲು ನಿರ್ಧರಿಸಿತ್ತು. ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಯತ್ನಾಳ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕಣದಲ್ಲಿಯ ರಾಜ್ಯ ಸರ್ಕಾರದ ನಿರ್ಧಾರ ಕ್ರಮವಾಗಿಲ್ಲ. ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐಗೆ ನೀಡಲಾಗಿದ್ದಂತ ಡಿ.ಕೆ ಶಿವಕುಮಾರ್ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮವದ ಬಗ್ಗೆ ಸೂಕ್ತ ನಿರ್ದೇಶವನ್ನು ಸರ್ಕಾರಕ್ಕೆ ನೀಡುವಂತೆ ಅರ್ಜಿಯಲ್ಲಿ ಕೋರಿದ್ದಾರೆ. ಈಗಾಗಲೇ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಳೆದ ಸಚಿವ ಸಂಪುಟ ಸಭೆಯಲ್ಲಿ ಡಿಕೆಶಿ ಮೇಲಿನ ಕೇಸ್ ಸಂಬಂಧ ತೆಗೆದುಕೊಂಡ ನಿರ್ಧಾರದ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದರು. ಅಲ್ಲದೇ ತಾವು ಸರ್ಕಾರದ ಕ್ರಮವನ್ನು ಕೋರ್ಟ್ ನಲ್ಲಿ ಪ್ರಶ್ನಿಸೋದಾಗಿಯೂ ತಿಳಿಸಿದ್ದರು. ಇದೀಗ ಅದರಂತೆ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.