ದಾವಣಗೆರೆ.: ಪ್ರಸಕ್ತ ಸಾಲಿನಲ್ಲಿ ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಸಮುದಾಯ, ಅಲೆಮಾರಿ, ಅರೆ ಅಲೆಮಾರಿ, ಮಡಿವಾಳ, ಸವಿತಾ ಸಮಾಜ, ಒಕ್ಕಲಿಗ ಸಮುದಾಯ ಜನಾಂಗಗಳ ಸಮುದಾಯಕ್ಕೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಾಲ ಸೌಲಭ್ಯಗಳ ವಿವರ ; ಡಿ ದೇವರಾಜು ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆಗಳ ಸಾಲ ಸೌಲಭ್ಯ ಒದಗಿಸಲಾಗುವುದು.
ಆಸಕ್ತರು ಅರ್ಜಿಗಳನ್ನು ಸೇವಾ ಸೇವಾ ಸಿಂಧು ಪೆÇೀರ್ಟಲ್ http;//sevaSindhu.Karnataka govt.in ಮುಖಾಂತರ ಗ್ರಾಮ ಒನ್ , ಬೆಂಗಳೂರು ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಆ.31 ಕೊನೆಯ ದಿವಾಗಿರುತ್ತದೆ.
ಹೆಚ್ಚಿನ ಮಾಹಿಗಾಗಿ ನಿಗಮದ ವೆಬ್ಸೈಟ್ www.dbcdc.karnataka.govt.in ಇಲ್ಲಿ ಸಂಪರ್ಕಿಸಿ ತಿಳಿಯಬಹುದಾಗಿದೆ. ಅಥವಾ ನಿಗಮದ ಸಹಾಯವಾಣಿ ಸಂ. 08192310934 ಗೆ ಕರೆ ಮಾಡಬಹುದಾಗಿದೆ ಎಂದು ಡಿ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.