ಬೆಂಗಳೂರು : ಕನ್ನಡದ ರಾಪರ್ ಚಂದನ್ ಶೆಟ್ಟಿ ಹಾಗೂ ಕಿರುತೆರೆ ನಟಿ ನಿವೇದಿತಾ ಗೌಡ ಅವರ ಬಾಳಲ್ಲಿ ಬಿರುಗಾಳಿ ಎದ್ದಿದ್ದು,. ಇಬ್ಬರು ಇದೀಗ ಡೈವೋರ್ಸ್ ಹಂತಕ್ಕೆ ತಲುಪಿದ್ದಾರೆ ಎಂದು ಕನ್ನಡ ಮಾಧ್ಯಮಗಳಲ್ಲಿ ವರದಿಯಾಗಿದೆ.
ಕನ್ನಡದ ಬಿಗ್ ಬಾಸ್ ಶೋ ಮೂಲಕ ಮನೆಮಾತಾಗಿದ್ದ ರಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಬಳಿಕ ಇಬ್ಬರೂ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಇತ್ತೀಚೆಗೆ ನಿವೇದಿತಾ ಗೌಡ ಕನ್ನಡದ ಕಿರುತೆರೆಯಲ್ಲಿ ಹಲವು ಶೋಗಳಲ್ಲಿ ಪಾಲ್ಗೊಳ್ಳುತ್ತಿದ್ದರು.
ಇದರ ನಡುವೆ ಇದೀಗ ಸ್ಯಾಂಡಲ್‌ವುಡ್‌ನ ಸ್ಟಾರ್ ಜೋಡಿ ಎಂದೇ ಖ್ಯಾತಿಗೊಂಡಿರುವ ರ್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಜೋಡಿ ದಾಂಪತ್ಯ ಜೀವನದಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದೀಗ ಇಬ್ಬರು ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಚೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ. ತಾರಾ ಜೋಡಿಯಾಗಿ ಮಿಂಚಿದ್ದ ನಿವೇದಿತಾ ಹಾಗೂ ಚಂದನ್ ವಿಚ್ಚೇದನ ಸುದ್ದಿ ಸ್ಯಾಂಡಲ್‌ವುಡ್‌ನಲ್ಲಿ ಸಂಚಲನ ಸೃಷ್ಟಿಸಿದೆ. ಈ ಕುರಿತಂತೆ ಇದುವರೆಗೆ ಇಬ್ಬರಿಂದಲೂ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ. ಇತ್ತೀಚೆಗೆ ಕಲರ್ಸ್ ಕನ್ನಡದ ಕಾರ್ಯಕ್ರಮದಲ್ಲಿ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಇಬ್ಬರ ವಿಚ್ಚೇದನದ ವರದಿಗೆ ಅಭಿಮಾನಿಗಳು ಶಾಕ್ ಆಗಿದ್ದಾರೆ.