ಬೆಂಗಳೂರು:ಇತ್ತೀಚಿನ ದಿನಗಳಲ್ಲಿ ಮಕ್ಕಳು ತಂದೆ ತಾಯಿಯನ್ನು ಸರಿಯಾಗಿ ನೋಡಿಕೊಳ್ಳದೆ ವೃದ್ಧಾಶ್ರಮಕ್ಕೆ ಹಾಕುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ. ಬೆಂಗಳೂರು ಪೊಲೀಸರು ಮಹತ್ಕಾರ್ಯಕ್ಕೆ ಕೈ ಹಾಕಿದ್ದಾರೆ. ಇನ್ನು ಮುಂದೆ ಪೋಷಕರನ್ನು ವೃದ್ಧಾಶ್ರಮಕ್ಕೆ ಹಾಕುವ ಮಕ್ಕಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.
ತಂದೆ ತಾಯಿಯನ್ನ ಸರಿಯಾಗಿ ನೋಡಿಕೊಳ್ಳದ ಮಕ್ಕಳ ಮೇಲೆ ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಕೇಸ್ ಬುಕ್ ಮಾಡುವಂತೆ ಪೊಲೀಸ್ ಕಮೀಷನರ್ ಬಿ. ದಯಾನಂದ್ ಸೂಚನೆ ನೀಡಿದ್ದಾರೆ.
ಆರ್ಥಿಕವಾಗಿ ಶಕ್ತರಾಗಿ ತಮ್ಮ ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿರುವ ಮಕ್ಕಳನ್ನು ಪತ್ತೆಹಚ್ಚಲು ಮುಂದಾಗಿ ವೃದ್ಧಾಶ್ರಮಗಳಿಂದ ತಮ್ಮ ಪೋಷಕರನ್ನು ಕರೆದೊಯ್ಯುವಂತೆ ಸೂಚನೆ ನೀಡಿದ್ದಾರೆ.