ಕಳೆದ ಹಲವು ದಿನಗಳಿಂದ ಸನಾತನ ಧರ್ಮ ಕುರಿತು ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ತಮಿಳುನಾಡಿನ ಡಿಎಂಕೆ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ. ಧರ್ಮದ ವಿಚಾರವಾಗಿ ಅವಹೇಳನಕಾರಿ ಹೇಳಿಕೆ ನೀಡಿದ್ದರಿಂದ ಸ್ಟಾಲಿನ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ತಮಿಳುನಾಡು ಸಿಎಂ ಸ್ಟಾಲಿನ್ ಪುತ್ರ ಸಚಿವ ಉದಯ ನಿಧಿ ಸನಾತನ ಧರ್ಮವನ್ನು ಕೊರೊನಾ, ಡೆಂಗಿ ಹಾಗೂ ಮಲೇರಿಯಾ ರೋಗಕ್ಕೆ ಹೋಲಿಸಿ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಅಲ್ಲದೇ, ಸಂಸದ ಎ. ರಾಜಾ ಕೂಡಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಡಿಎಂಕೆ ಪಕ್ಷದ ನಾಯಕರ ವಿವಾದಾತ್ಮಕ ಹೇಳಿಕೆಗೆ ದೇಶಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೇ, ಪ್ರತಿಭಟನೆ ಕೂಡಾ ಹಮ್ಮಿಕೊಳ್ಳಲಾಗಿತ್ತು. ಇನ್ನು, ಉದಯ ನಿಧಿ ವಿರುದ್ಧ ದೇಶದ ಹಲವು ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತಮಿಳುನಾಡಿನ ಡಿಎಂಕೆ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.