ತಾಂತ್ರಿಕ ಸಮಸ್ಯೆಯಿಂದ ಗಗನಯಾನ ಪರೀಕ್ಷಾ ಉಡಾವಣೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಆದಷ್ಟು ಬೇಗ ತಾಂತ್ರಿಕ ಸಮಸ್ಯೆಯನ್ನು ಪರಿಶೀಲಿಸಿ ಮತ್ತೊಮ್ಮೆ ಗಗನಯಾನ ಯೋಜನೆಯ ಪರೀಕ್ಷಾ ವಾಹಕದ ಉಡಾವಣೆಯನ್ನು ಕೈಗೊಳ್ಳುವುದಾಗಿ ಇಸ್ರೋ ಅಧ್ಯಕ್ಷ ಸ್ವಾಮಿನಾಥನ್ ತಿಳಿಸಿದ್ದಾರೆ.
ನಮ್ಮ ಹೆಮ್ಮೆಯ ಇಸ್ರೋ ಇಂದು ಬೆಳಗ್ಗೆ 8.45ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಗಗನಯಾನ ಯೋಜನೆಯ ಪರೀಕ್ಷಾ ವಾಹಕದ ಉಡಾವಣೆಯನ್ನು ಯಶಸ್ವಿಯಾಗಿ ನೆರವೇರಿಸಬೇಕಿತ್ತು ಆದರೆ, ತಾಂತ್ರಿಕ ಸಮಸ್ಯೆಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾಗಿರುವ ಇಸ್ರೋ ಇಂದು ಗಗನಯಾನ ನೌಕೆಯ ಸುರಕ್ಷತಾ ಪ್ರಯೋಗ ನಡೆಸಲು ತಯಾರಿ ನಡೆಸಿತ್ತು. ಬೆಳಗ್ಗೆ 8 ಗಂಟೆಗೆ ಪರೀಕ್ಷಾ ವಾಹಕದ ಉಡಾವಣೆಯಾಗಬೇಕಿತ್ತು. ಆದರೆ ಕೆಲವು ಸಮಸ್ಯೆಗಳಿಂದಾಗಿ ಉಡಾವಣೆ ಸಮಯದಲ್ಲಿ ವ್ಯತ್ಯಾಸವಾಗಿತ್ತು. ನೌಕೆ ಉಡಾವಣೆ ಸ್ಥಗಿತಗೊಂಡಿದೆ. ಹವಾಮಾನ ವೈಪರೀತ್ಯ, ತಾಂತ್ರಿಕ ಕಾರಣದಿಂದ ಮಾನವಸಹಿತ ಗಗನಯಾನ ಯೋಜನೆಯ ನೌಕೆ ಪ್ರಯೋಗ ಸ್ಥಗಿತಗೊಂಡಿದೆ ಎಂದು ಇಸ್ರೋ ಮುಖ್ಯಸ್ಥ ಸೋಮನಾಥ್ ಮಾಹಿತಿ ನೀಡಿದ್ದಾರೆ. ಪ್ರಯೋಗ ಯಶಸ್ವಿಯಾಗಿದ್ದರೆ ಈ ಪ್ರಯೋಗದಿಂದ ನೌಕೆಯ ಸುರಕತೆ ಹಾಗೂ ತುರ್ತು ಸಂದರ್ಭಗಳಲ್ಲಿ ಗಗನ ಯಾತ್ರಿಕರು ಸುರಕ್ಷಿತವಾಗಿ ಲ್ಯಾಂಡಿಂಗ್ ಆಗುವ ಕುರಿತು ಇಸ್ರೋ ಅಧ್ಯಯನ ನಡೆಸಲು ಸಹಾಯವಾಗುತ್ತಿತ್ತು.