ಚಾಮರಾಜನಗರ: ತಾತನ ಅಂತ್ಯಕ್ರಿಯೆಗೆ ತೆರಳುತ್ತಿದ್ದ ಮೆಡಿಕಲ್ ಕಾಲೇಜು ವಿದ್ಯಾರ್ಥಿಯೋರ್ವ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಚಾಮರಾಜ ನಗರದ ಪಣ್ಯದ ಹುಂಡಿ ಬಳಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ನಿತೀಶ್ ಪೂಜಾರಿ (23) ಎಂದು ಗುರುತಿಸಲಾಗಿದೆ. ಚಾಮರಾಜನಗರ ಸರ್ಕಾರಿ ಮೆಡಿಕಲ್ ಕಾಲೇಜಿನ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದ ನಿತೀಶ್ ಪೂಜಾರಿ, ತನ್ನ ತಾತನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪಘಾತವಾಗಿದೆ. ಪಣ್ಯದ ಹುಂಡಿ ಬಳಿ ರೋಡ್ ಹಂಪ್ ನಲ್ಲಿ ನಿಯಂತ್ರಣ ತಪ್ಪಿ ಬಿದ್ದಿರಬಹುದು ಎನ್ನಲಾಗುತ್ತಿದ್ದು, ಈ ಬಗ್ಗೆ ಚಾಮರಾಜನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


































