ಆಂಧ್ರಪ್ರದೇಶ: ತಿರುಪತಿ ತಿರುಮಲದಲ್ಲಿ ಲಡ್ಡು ವಿವಾದ ಉಂಟಾದ ಬಳಿಕ ಸರಕಾರ ನಂದಿನಿ ತುಪ್ಪಕ್ಕೆ ಬೇಡಿಕೆ ಇಟ್ಟಿದೆ. ಒಂದು ತಿಂಗಳ ಹಿಂದೆ ಟಿಟಿಡಿ ಕೆಎಂಎಫ್‌ಗೆ ಟೆಂಡರ್ ನೀಡಿದ ನಂತರ ನಂದಿನಿ ತುಪ್ಪ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ಹೇಳಿದ್ದಾರೆ.
ತಿರುಪತಿ ಲಡ್ಡು ವಿವಾದದ ಬಳಿಕ ಕೆಎಮ್‌ಎಫ್ ಹೈ ಅಲರ್ಟ್:
“ನಾವು ಒಂದು ತಿಂಗಳ ಹಿಂದೆ ತುಪ್ಪವನ್ನು(ಟಿಟಿಡಿಗೆ) ಸರಬರಾಜು ಮಾಡುತ್ತಿದ್ದೇವೆ. ನಾವು ವಾಹನಗಳಿಗೆ ಜಿಪಿಎಸ್ ಸಿಸ್ಟಮ್ ಮತ್ತು ಜಿಯೋ ಲೊಕೇಶನ್ ಸಾಧನಗಳನ್ನು ಅಳವಡಿಸಿದ್ದೇವೆ. ಇದರಿಂದ ವಾಹನ ಎಲ್ಲಿ ನಿಲ್ಲುತ್ತವೆ ಎಂಬುದನ್ನು ನಾವು ಕಂಡುಹಿಡಿಯಬಹುದು. ಇದು ಎಲ್ಲಿಯೂ ಕಲಬೆರಕೆ ಮಾಡದಂತೆ ನೋಡಿಕೊಳ್ಳಲು ಸಹಾಯಕವಾಗುತ್ತದೆ” ಎಂದು ಜಗದೀಶ್ ತಿಳಿಸಿದ್ದಾರೆ.
ಕೆಎಂಎಫ್, ಟಿಟಿಡಿಗೆ 350 ಟನ್ ತುಪ್ಪ ಪೂರೈಸುವ ಗುತ್ತಿಗೆ ಪಡೆದುಕೊಂಡಿದೆ. ಅಗತ್ಯ ಬಿದ್ದಾಗ ತುಪ್ಪ ಪೂರೈಕೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪ ಮಾಡಿದ್ದರು. ಅಲ್ಲದೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.