ತಿರುಪತಿ :ತಿರುಪತಿ ತಿರುಮಲ ಲಡ್ಡು ಪ್ರಸಾದ ಕಲಬೆರಕೆ ಬೆನ್ನಲ್ಲೆ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದೆ. ತಿಮ್ಮಪ್ಪನ ಸನ್ನಿಧಿಗೆ ಎರಡು ಟ್ರಕ್‌ಗಳಲ್ಲಿ ಕೆಎಂಎಫ್ ಶುದ್ಧ ನಂದಿನಿ ತುಪ್ಪ ಆಗಮಿಸಿದೆ.
ಎರಡು ಟ್ರಕ್‌ಗಳಲ್ಲಿ ತಿರುಪತಿಗೆ ಕೆಎಂಎಫ್ ತುಪ್ಪ ಬಂದಿದೆ. ಒಂದು ಟ್ರಕ್ ಯಲಹಂಕ ಮದರ್ ಡೈರಿಯಿಂದ ಮತ್ತು ಚನ್ನರಾಯಪಟ್ಟಣದಿಂದ ಮತ್ತೊಂದು ಟ್ರಕ್‌ನಲ್ಲಿ ತುಪ್ಪ ಸರಬರಾಜಾಗಿದೆ.
ಸುಮಾರು 26 ಟನ್ ತುಪ್ಪ 2 ಟ್ರಕ್‌ಗಳಲ್ಲಿ ಆಗಮಿಸಿದ್ದು, ಲಡ್ಡು ವಿವಾದದ ಮಧ್ಯೆ ಕೆಎಂಎಫ್ ನಂದಿನಿ ತುಪ್ಪ ಸರಬರಾಜಾಗಿದೆ. ಸದ್ಯ ತಿರುಪತಿಗೆ ಆಗಮಿಸಿರುವ ಟ್ರಕ್‌ಗಳು ತಿರುಮಲಕ್ಕೆ ತಲುಪಲಿವೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ