ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಇಂದು ಅನಾರೋಗ್ಯ ಪೀಡಿತ ಪತ್ನಿಯನ್ನು ಭೇಟಿಯಾಗಲು ದೆಹಲಿಯ ತಮ್ಮ ನಿವಾಸಕ್ಕೆ ಆಗಮಿಸಿದ್ದಾರೆ.
ಮನೀಶ್ ಸಿಸೋಡಿಯಾ ಅವರು ಪತ್ನಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ಪತ್ನಿಯನ್ನು ಭೇಟಿ ಮಾಡಲು ಐದು ದಿನಗಳ ಅನುಮತಿ ಕೋರಿ ಸಿಸೋಡಿಯಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಐದು ದಿನದ ಬದಲು ಒಂದು ದಿನ ಮಾತ್ರ ಪತ್ನಿಯ ಭೇಟಿಗೆ ಅವಕಾಶ ಕಲ್ಪಿಸಿ ಆದೇಶ ನೀಡಿದೆ.
ಇನ್ನು ಇಂದು ಬೆಳಿಗ್ಗೆ 10ರಿಂದ ಸಂಜೆ 4ರ ವರೆಗೆ ಭೇಟಿಗೆ ಅವಕಾಶ ಕಲ್ಪಿಸಿದೆ ಅದರಂತೆ ಪೊಲೀಸ್ ಬೆಂಗಾವಲಿನ ಜೊತೆ ದೆಹಲಿಯಲ್ಲಿರುವ ಅವರ ಮನೆಗೆ ಭೇಟಿ ನೀಡಿ ಪತ್ನಿಯ ಅರೋಗ್ಯ ವಿಚಾರಿಸಿದ್ದಾರೆ.
ಸಿಸೋಡಿಯಾ ಅವರ ಪತ್ನಿ ಮಲ್ಟಿಪಲ್ ಸ್ಕ್ಲೆರೋಸಿಸ್ನ ಎಂಬ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾರೆ.