ಭದ್ರತಾ ದೃಷ್ಟಿಯಿಂದ ತುಂಗಭದ್ರಾ ಜಲಾಶಯದ ಮೇಲೆ ಚಿತ್ರೀಕರಣ ನಿಷೇಧಿಸಲಾಗಿದೆ. ಆದರೂ ಕೂಡ ತುಂಗಭದ್ರಾ ಜಲಾಶಯದ ಮೇಲಿನ ಪ್ರೀ ವೆಡ್ಡಿಂಗ್ ಫೋಟೋ ವೈರಲ್ ಆಗಿದೆ.
ನಿಷೇಧ ಇದ್ದರೂ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಹೇಗೆ ನಡೆಯಿತು? ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ಅಧಿಕಾರಿಗಳು ಅನುಮತಿ ನೀಡಿದ್ರಾ? ಎಂಬ ಪ್ರಶ್ನೆಗಳು ಉದ್ಭವಾಗಿವೆ.
ಯಾವಾಗ ಫೋಟೋ ಶೂಟ್ ಆಗಿದೆ, ಪರವಾನಿಗೆ ನೀಡಿದವರು ಯಾರು ಎಂಬುವುದರ ಬಗ್ಗೆ ತನಿಖೆ ನಡೆಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.