ಚಿಕ್ಕಮಗಳೂರು: ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಜೋರಾಗಿದ್ದು, ಹಲವೆಡೆ ಅವಘಡಗಳು ಸಂಭವಿಸುತ್ತಿವೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರಕ್ಕೆ ಜನರು ತತ್ತರಿಸಿ ಹೊಗಿದ್ದಾರೆ. ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ಬಂದ್ ಆಗಿದೆ.
ತುಂಗಾ ನದಿ ಪ್ರವಾಹದಂತೆ ಅಬ್ಬರಿಸುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 169ರಲ್ಲಿ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದೆ. ತಂಗಾ ನದಿ ನೀರು ಹೆದ್ದಾರಿ ಮೇಲೆ ರಭಸದಿಂದ ಹರಿಯುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಶೃಂಗೇರಿ ಹಾಗೂ ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ.
ರಾಜ್ಯದ ಕರಾವಳಿ, ಉತ್ತರ, ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 3ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
































