ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿಕೇಂದ್ರದಲ್ಲಿ ಇದೇ ಅ.21 ಮತ್ತು 22ರಂದು ಬೆಳಿಗ್ಗೆ 10ಕ್ಕೆ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಕಸಬಾ ಮತ್ತು ರಾಂಪುರ ಹೋಬಳಿ ರೈತರಿಗೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತುಂತುರು ಮತ್ತು ಹನಿ ನೀರಾವರಿ ಘಟಕಗಳ ಉಪಯೋಗ ಮತ್ತು ನಿರ್ವಹಣೆ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ತರಬೇತಿ ಕಾರ್ಯಕ್ರಮದಲ್ಲಿ ಡಾ. ರಾಜಶೇಖರ ಡಿ ಭಾರ್ಕೆರ್ ಸಹ ಪ್ರಾಧ್ಯಪಕರು, ಇಂಜಿನಿಯರಿಂಗ್ ವಿಭಾಗ, ತೋಟಗಾರಿಕೆ ಮಹಾ ವಿದ್ಯಾಲಯ, ಬಬ್ಬೂರು ಇವರು ನೀರಿನ ಸಮರ್ಥ ಬಳಕೆ, ಹನಿ ನೀರಾವರಿ ಮತ್ತು ಸ್ಪ್ರೀಂಕ್ಲರ್ ಘಟಕಗಳ ಉಪಯೋಗ ಮತ್ತು ಅವುಗಳ ನಿರ್ವಹಣೆಯ ಕುರಿತು ವಿಷಯ ಮಂಡನೆ ಮತ್ತು ಪ್ರಾತ್ಯಕ್ಷಿಕೆ ನೀಡುವರು ಹಾಗೂ ಡಾ.ಶಶಿಧರ ಬಿ.ಜಿ. ನಿವೃತ್ತ ಪ್ರಾಧ್ಯಪಕರು (ಬೇಸಾಯಶಾಸ್ತ್ರ), ನೀರಾವರಿ ತಜ್ಞರು ಮತ್ತು ಸಲಹೆಗಾರರು ಇವರು ಕೃಷಿ ಸಾಲು ಬೆಳೆಗಳಲ್ಲಿ ಹನಿ ನೀರಾವರಿ ಪದ್ದತಿಯ ಸಮರ್ಥ ಬಳಕೆ ಕುರಿತು ವಿಷಯ ಮಂಡನೆ ಮಾಡುವರು.
ಅ.21ರಂದು ಆಸಕ್ತ ಮೊಳಕಾಲ್ಮೂರು ತಾಲ್ಲೂಕಿನ ಕಸಬಾ ಹೋಬಳಿಯ 60 ಜನ ರೈತಭಾಂದವರು ಮತ್ತು ಅ.22ರಂದು ಆಸಕ್ತ ರಾಂಪುರ ಹೋಬಳಿಯ ರೈತಭಾಂದವರು ತರಬೇತಿಯಲ್ಲಿ ಭಾಗವಹಿಸಲು ಮೊಬೈಲ್ ಸಂಖ್ಯೆ 8277931058 ಗೆ ಕರೆ ಮಾಡಿ ನೊಂದಾಯಿಸಲು ಶ್ರೀ ರಜನೀಕಾಂತ. ಆರ್ ಸಹಾಯಕ ಕೃಷಿ ನಿರ್ದೇಶಕರು, ಜಿಲ್ಲಾ ಕೃಷಿ ತರಬೇತಿಕೇಂದ್ರ, ಬಬ್ಬೂರು ಫಾರಂ ಅವರು ಈ ತರಬೇತಿಯ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದ್ದಾರೆ.
ಮೊದಲು ನೋಂದಣಿ ಮಾಡಿಕೊಂಡ 60 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತಬಾಂಧವರು ಕಡ್ಡಾಯವಾಗಿ ತಮ್ಮ ಎಫ್‍ಐಡಿ ಕಾರ್ಡ್, ರೇಷನ್ ಕಾರ್ಡ್ ಅಥವಾ ಚುನಾವಣೆ ಗುರುತಿನ ಚೀಟಿ ತರುವಂತೆ ಪ್ರಕಟಣೆ ತಿಳಿಸಿದೆ