2024ರ ಸಾಲಿನಲ್ಲಿ ತುಮಕೂರು ಜಿಲ್ಲೆಯಲ್ಲಿ ರೈತರಿಂದ ಖರೀದಿಸ್ಪಲಟ್ಟ ಉಂಡೆ ಕೊಬ್ಬರಿ ಮೊತ್ತವನ್ನು ಕೇಂದ್ರ ಸರ್ಕಾರವು ರೈತರ ಖಾತೆಗೆ ಜಮೆ ಮಾಡಿದೆ.
ಸುಮಾರು ರೂ.346.50 ಕೋಟಿ ಮೊತ್ತವನ್ನು ರೈತರ ಖಾತೆಗೆ ನೇರವಾಗಿ ಪಾವತಿಸಲಾಗಿದೆ. 2024ನೇ ಸಾಲಿನಲ್ಲಿ ತುಮಕೂರು ಜಿಲ್ಲೆಯ ಸುಮಾರು 27,000 ರೈತರಿಂದ
ಒಟ್ಟು 3,15,000 ಕ್ವಿಂಟಲ್ ಉಂಡೆ ಕೊಬ್ಬರಿಯನ್ನು ಕನಿಷ್ಟ ಬೆಂಬಲ ಬೆಲೆಯಡಿಯಲ್ಲಿ ಖರೀದಿಸಲಾಗಿತ್ತು.
ಈಗ ಆ ಹಣವನ್ನು ಪಾವತಿ ಮಾಡಲಾಗಿದೆ. ಈ ಬಗ್ಗೆ ಖುದ್ದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ.