ಹೈದರಬಾದ್: 2024 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ತೆಲಂಗಾಣ ರಾಜ್ಯದಿಂದ ಸ್ಪರ್ಧಿಸುವಂತೆ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಮೂಲಗಳ ಪ್ರಕಾರ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ರೆಡ್ಡಿ ಅವರು, ತೆಲಂಗಾಣ ರಾಜ್ಯ ರಚನೆಗೆ ಕಾರಣಿಭೂತರಾಗಿರುವ ಸೋನಿಯಾ ಗಾಂಧಿ ಅವರನ್ನು ಇಲ್ಲಿನ ಜನ ತಾಯಿ ಎಂದು ಭಾವಿಸಿದ್ದಾರೆ. ಹಾಗಾಗಿ ಜನ ಲೋಕಸಭಾ ಗೆಲುವಿನ ಮೂಲಕ ಅವರ ಋಣ ತೀರಿಸಬೇಕು ಎಂದು ತಿಳಿಸಿದ್ದಾರೆ.
ಇನ್ನು ಈ ವಿಚಾರವಾಗಿ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸೋನಿಯಾ ಗಾಂಧಿ ತಿಳಿಸಿದ್ದಾರೆ ಎಂದು ರೇವಂತ್ ರೆಡ್ಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


































