ಬೆಂಗಳೂರು : ನಾನು ತಪ್ಪು ಮಾಡಿಲ್ಲ, ಮುಂದೆಯೂ ಮಾಡಲ್ಲ, ನನಗೆ ನ್ಯಾಯ ಸಿಗುವ ವಿಶ್ವಾಸ ಇದೆ ಎಂದು ಮುಡಾ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿರುವ ಬೆನ್ನಲ್ಲೇ ಸಿಎಂ ವಿರುದ್ಧ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಸಿಎಂ ಆಗಿದ್ದಾಗ ಸಿದ್ದರಾಮಯ್ಯನವರು ಒಂದು ಮನೆ ಕಟ್ಟಿದ್ದರು. ಯಾರ ಜಾಗದಲ್ಲಿ ನೀವು ಮನೆ ಕಟ್ಟಿದ್ದೀರಾ, ಆ ದಾಖಲೆ ಬೇಕಾ? ದಲಿತ ಸಿಎ ಸೈಟ್ನಲ್ಲಿ ಅಕ್ರಮವಾಗಿ ಮನೆ ಕಟ್ಟಿದವರು ಯಾರು ಎಂದು ಪ್ರಶ್ನಿಸಿದ್ದಾರೆ.
15 ಸೈಟ್ ತಗೊಂಡಿರುವುದಲ್ಲದೇ, ಇಂತದೇ ಹಗರಣದ ಸರಣಿಯೇ ಇದೆ ಮೈಸೂರಿನಲ್ಲಿ. ವಿಕಲಚೇತನ ದಲಿತ ವ್ಯಕ್ತಿ 24 ಸಾವಿರ ರೂ. ನೀಡಿ ಸೈಟ್ ಪಡೆಯುತ್ತಾರೆ. ಸಾಕಮ್ಮ ಎಂಬುವರ ಹೆಸರಿನಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಿ 10 ಸಾವಿರ ರೂ. ಸ್ಕೈಯರ್ ಫೀಟ್ ಜಾಗ ಅಕ್ರಮವಾಗಿ ಪಡೆಯುತ್ತಾರೆ. ಆಮೇಲೆ ಸೈಟ್ ತಗೊಂಡವನು ಯಾರೋ ಮನೆ ಕಟ್ಟಿದ್ದಾರೆಂದು ನೋಡುವುದಕ್ಕೆ ಬರ್ತಾರೆ. ಈ ಬಗ್ಗೆ ನನ್ನ ಬಳಿ ಈಗಲೂ ದಾಖಲೆ ಇದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ನನ್ನದು ತೆರದ ಪುಸ್ತಕ ಅಂತಾ ಸಿದ್ದರಾಮಯ್ಯ ಯಾವಾಗಲೂ ಹೇಳುತ್ತಾರೆ. ಅದನ್ನ ತೆಗೆಯಿರಿ ಯಾರಿಗೆ ನೀವು ಸೇಲ್ ಮಾಡಿದ್ದೀರಿ? ಇನ್ನೂ ಯಾರ ಕೈಯಲ್ಲಿದೆ ಸೈಟ್, ಹೆಸರಿಗೆ ಮಾರಾಟ ತೋರಿಸಿಕೊಂಡಿದ್ದಾರೆ. ಅದನ್ನು ತೆಗೆದರೆ ಮತ್ತೊಂದು ರಾಮಾಯಣ ಶುರುವಾಗುತ್ತೆ ಎಂದು ಸಿಎಂ ವಿರುದ್ಧ ಹೆಚ್‌ಡಿಕೆ ಗಂಭೀರ ಆರೋಪ ಮಾಡಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ