ದಾವಣಗೆರೆ : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದಿಂದ, ಪ್ರಸಕ್ತ ಸಾಲಿನ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಅಡಿಯಲ್ಲಿ (10+1) ಕುರಿ, ಮೇಕೆ ಘಟಕಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನಿಸಲಾಗಿದೆ.
ವಿಶೇಷ ಘಟಕ ಯೋಜನೆಯಡಿ-23 ಮತ್ತು ಗಿರಿಜನ ಉಪಯೋಜನೆಯಡಿ-12 ಘಟಕಗಳು ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು ಮತ್ತು ಪಶು ಸಂಗೋಪನೆಯಲ್ಲಿ ತೊಡಗಿಸಿಕೊಂಡಿರುವ 18 ರಿಂದ 60 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಸಹಾಯಕ ನಿರ್ದೇಶಕರು, ತಾಲ್ಲೂಕು ಪಶು ಆಸ್ಪತ್ರೆ, ಇವರಿಂದ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಮಾರ್ಚ್ 10 ರೊಳಗಾಗಿ ಜಿಲ್ಲಾ ಅನುಷ್ಟಾನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ತಮ್ಮ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ ಅಥವಾ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಗೆ ಖುದ್ದಾಗಿ ಸಂಪರ್ಕಿಸಬಹುದೆAದು ನಿಗಮದ ಸಹಾಯಕ ನಿರ್ದೇಶಕರು ಲೀನಾ ಸಜ್ಜನ್.ಜಿ.ಪಿ ತಿಳಿಸಿದ್ದಾರೆ.






























