ದಾವಣಗರೆ; ವಿಧಾನಸಭೆಯ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ (95) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಸಂಜೆ ಕೊನೆಯುಸಿರೆಳೆದರು. ಅವರು, 95ನೇ ವಯಸ್ಸಿನಲ್ಲಿ ಭಾರತದ ಅತ್ಯಂತ ಹಿರಿಯ ಶಾಸಕರಾಗಿ ಗುರುತಿಸಿಕೊಂಡಿದ್ದಾರೆ. ಜೂನ್ 16, 1930ರಂದು ದಾವಣಗೆರೆಯಲ್ಲಿ ಜನಿಸಿದ ಇವರು, ಸಾಮಾನ್ಯ ಕುಟುಂಬದಿಂದ ಬಂದು ರಾಜಕೀಯ, ಶಿಕ್ಷಣ, ಉದ್ಯಮ ಹಾಗೂ ಸಮಾಜಸೇವೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಶಿವಶಂಕರಪ್ಪ ಅವರ ನಿಧನ ಹಿನ್ನಲೆಯಲ್ಲಿ ದಾವಣಗೆರೆ ವಿವಿಯ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಅಲ್ಲದೇ ನಾಳೆ ( ಸೋಮವಾರ) ದಾವಣಗೆರೆ ವಿಶ್ವ ವಿದ್ಯಾಲಯಕ್ಕೆ ರಜೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ವಿವಿ, ಸ್ವಾಯತ್ತ, ಸ್ನಾತಕೋತ್ತರ ಕೇಂದ್ರಗಳಿಗೂ ರಜೆಯನ್ನು ಘೋಷಿಸಿ ವಿವಿಯ ಕುಲಪತಿ ಪ್ರೊ. ಬಿ.ಡಿ ಕುಂಬಾರ್ ಆದೇಶಿಸಿದ್ದಾರೆ.
































