ಬೆಂಗಳೂರು : ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಈ ಬಾರಿಯ ದೀಪಾವಳಿಗೆ ಕೇವಲ ಹಸಿರು ಪಟಾಕಿ ಮಾತ್ರ ಸಿಡಿಸಬೇಕು ಅದು ರಾತ್ರಿ 8 ಗಂಟೆಯಿಂದ 10 ಗಂಟೆಗಳ ಕಾಲದವರೆಗೆ ಮಾತ್ರ ಪಟಾಕಿ ಸಿಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಈಗಾಗಲೇ ಹೇಳಿದೆ. ಕೇವಲ ಹಸಿರು ಪಟಾಕಿ ಮಾತ್ರ ಸಿಡಿಸಬೇಕು ಇದರಿಂದ ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಈ ಒಂದು ಆದೇಶ ನೀಡಿದೆ. ಹಾಗಾಗಿ ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಹಸಿರು ಪಟಾಕಿ ಸಿಡಿಸಲು ಅವಕಾಶವಿದೆ ಎಂದರು.
ಇನ್ನು ಎಲ್ಲಾ ಜಿಲ್ಲೆಗಳ ಡಿಸಿಗಳಿಗೆ ಸಿಇಓ ಗಳಿಗೆ ಸೂಚನೆ ನೀಡಿದ ಅವರು, ಪಟಾಕಿ ಸಿಡಿಸುವ ಸಂದರ್ಭದಲ್ಲಿ ಯಾವುದೇ ಸಾವು ನೋವುಗಳಾಗದಂತೆ ಹಾಗೂ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿಗಳು ಕಂಡುಬಂದಲ್ಲಿ ಅಂತಹ ಪಟಾಕಿ ಮಾಲೀಕರ ಗೋದಾಮಿನ ಮೇಲೆ ದಾಳಿ ಮಾಡಿ, ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.